ಕುಂಬಳೆ: ನಿವೃತ್ತ ಕಾಸರಗೋಡು ಜಿಲ್ಲಾ ವಿದ್ಯಾಧಿಕಾರಿ ವಿ.ದಿನೇಶ್ (56)ಡೆಂಗ್ಯೂ ಜ್ವರ ಪೀಡಿತರಾಗಿ ಜೂ. 13ರಂದು ನಿಧನ ಹೊಂದಿದರು. ಇವರು ಕಳೆದ ಬುಧವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಫಲಕಾರಿಯಾಗದೆ ಶುಕ್ರವಾರ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

ಇವರು ಕುಂಜತ್ತೂರು ಪ್ರದೇಶದ ಶಾಲೆಗಳಲ್ಲಿ ಅಧ್ಯಾಪಕರಾಗಿ, ಬಂಗ್ರ ಮಂಜೇಶ್ವರ ಸರಕಾರಿ ವಿದ್ಯಾಲಯದಲ್ಲಿ ಮುಖ್ಯೋಪಾಧ್ಯಾಯರಾಗಿ, ಮಂಜೇಶ್ವರ ಉಪಜಿಲ್ಲಾ ಶಿಕ್ಷಣ ಅಧಿಕಾರಿಯಾಗಿ, ಕಾಸರಗೋಡು ಜಿಲ್ಲಾ ಶಿಕ್ಷಣ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.




