ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಕುಂಡಮಲ ಪ್ರದೇಶದ ಇಂದ್ರಾಯಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದು ಆರು ಮಂದಿ ಸಾವನ್ನಪ್ಪಿದ್ದಾರೆ.


ಇನ್ನೂ 25 ಮಂದಿ ನಾಪತ್ತೆಯಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆರು ಮಂದಿಯನ್ನು ರಕ್ಷಿಸಲಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಸೇತುವೆ ಹಳೆಯದಾಗಿದ್ದರಿಂದ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕುಸಿದಿದೆ ಎನ್ನಲಾಗಿದೆ.




