ಮುಳ್ಳಯ್ಯನಗಿರಿ-ದತ್ತಪೀಠ ಮಾರ್ಗ ಬಂದ್‌

Share with

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಭಾರೀ ಮಳೆಗೆ ಬೃಹತ್ ಮರ ರಸ್ತೆಗೆ ಉರುಳಿ ಬಿದ್ದಿದೆ.

ಪರಿಣಾಮ ಚಿಕ್ಕಮಗಳೂರು-ಮುಳ್ಳಯ್ಯನಗಿರಿ-ದತ್ತಪೀಠ ಮಾರ್ಗದ ರಸ್ತೆ ಸಂಪೂರ್ಣ ಬಂದ್ ಆಗಿದೆ. ಬೃಹತ್ ಮರ ರಸ್ತೆಗೆ ಬಿದ್ದ ಪರಿಣಾಮ ಪ್ರವಾಸಿಗರು ಹಾಗೂ ಸ್ಥಳೀಯರು ಪರದಾಟ ಅನುಭವಿಸುವಂತಾಗಿದೆ. ದತ್ತಪೀಠ ಹಾಗೂ ಮುಳ್ಳಯ್ಯನಗಿರಿ ಹೋಗುವ ಸರ್ಕಲ್ ಬಳಿಯೇ ಮರ ಬಿದ್ದಿದ್ದು, 2 ಸ್ಥಳಗಳಿಗೆ ಸಂಪರ್ಕ ಸಂಪೂರ್ಣ ಕಟ್ ಆಗಿದೆ.

ಪೊಲೀಸರು ಮರ ತೆರವು ಮಾಡಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *