Karnataka Rains: ಕರ್ನಾಟಕದಾದ್ಯಂತ ಜೂನ್ 23ರವರೆಗೂ ಭಾರಿ ಮಳೆ, ಕರಾವಳಿಗೆ ರೆಡ್ ಅಲರ್ಟ್

Share with

ಬೆಂಗಳೂರು, ಜೂನ್ 17: ಕರ್ನಾಟಕದಾದ್ಯಂತ ಜೂನ್ 23ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಧಾರವಾಡ, ಹಾವೇರಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಮಳೆಯಾಗಲಿದೆ.

ಮಂಕಿ, ಸಿದ್ದಾಪುರ, ಮಂಗಳೂರು, ಆಗುಂಬೆ, ಕೊಟ್ಟಿಗೆಹಾರ, ಕ್ಯಾಸಲ್ರಾಕ್, ಪಣಂಬೂರು, ಗೇರುಸೊಪ್ಪ, ಕುಂದಾಪುರ, ಉಪ್ಪಿನಂಗಡಿ, ಕದ್ರಾ, ಬಂಟವಾಳ, ಕೋಟಾ, ಹೊನ್ನಾವರ, ಕುಮಟಾ, ಧರ್ಮಸ್ಥಳ, ಮಾಣಿ, ಪುತ್ತೂರು, ಭಾಗಮಂಡಲದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಮುಲ್ಕಿ, ಉಡುಪಿ, ಅಂಕೋಲಾ, ಯಲ್ಲಾಪುರ, ಶೃಂಗೇರಿ, ಕಳಸ, ಸುಳ್ಯ, ಜೋಯ್ಡಾ, ಕಿತ್ತೂರು, ಖಾನಾಪುರ, ಹುಂಚದಕಟ್ಟೆಯಲ್ಲಿ ಕೂಡ ಮಳೆಯಾಗಿದೆ.


Share with

Leave a Reply

Your email address will not be published. Required fields are marked *