ಡಿವೈಡರ್ ಗೆ ಕಾರು ಡಿಕ್ಕಿಯಾಗಿ NSUI ಮುಖಂಡ ಸೇರಿ ಇಬ್ಬರು ಮೃ*ತ್ಯು

Share with

ಮಂಗಳೂರು: ನಗರದ ಜಪ್ಪಿನಮೊಗರು ನಡುಮುಗೇರ ಬಳಿ ಮಂಗಳವಾರ(ಜೂ .17)ತಡರಾತ್ರಿ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ಇಬ್ಬರು ಯುವಕರು ದಾರುಣವಾಗಿ ಸಾ*ವನ್ನಪ್ಪಿರುವ ದುರ್ಘಟನೆ ನಡೆದಿದೆ.

ಮೃತ ದುರ್ದೈವಿಗಳು ಕದ್ರಿ ನಿವಾಸಿ ಅಮನ್ ರಾವ್ ಹಾಗೂ ಓಂ ಶ್ರೀ ಪೂಜಾರಿ ಎಂದು ತಿಳಿದು ಬಂದಿದೆ. ಕಾರು ಡಿವೈಡರ್ ಗೆ ಢಿಕ್ಕಿಯಾಗಿ ಮೋರಿಗೆ ಬಡಿದು ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಓಂ ಶ್ರೀ ಅವರು NSUI ಮುಖಂಡ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.


Share with

Leave a Reply

Your email address will not be published. Required fields are marked *