ಧರ್ಮಸ್ಥಳ: ಅಪರಾಧ ಕೃತ್ಯಗಳ ಮಾಹಿತಿ ನೀಡಲು ಸಿದ್ಧನಾದ ವ್ಯಕ್ತಿ..!ಪೊಲೀಸ್ ಠಾಣೆಗೆ ಹಾಜರು ಪಡಿಸಲು ವಕೀಲರ ಸಿದ್ಧತೆ

Share with

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತಿಳಿದಿರುವ ವ್ಯಕ್ತಿಯೊಬ್ಬ ಧರ್ಮಸ್ಥಳ ಠಾಣೆಗೆ ಬಂದು ಮಾಹಿತಿ ನೀಡುವುದಾಗಿ ಬರವಣಿಗೆ ಇರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು ಕಂಡು ಬಂದಿರುತ್ತದೆ. ಈ ಪತ್ರದ ನೈಜತೆಯನ್ನು ಪರಿಶೀಲಿಸುವ ಸಲುವಾಗಿ ಸದ್ರಿ ಪತ್ರದಲ್ಲಿ ನಮೂದಿಸಲಾಗಿದ್ದ ಬೆಂಗಳೂರಿನ ವಕೀಲರಿಗೆ ಧರ್ಮಸ್ಥಳ ಪೊಲೀಸ್ ಠಾಣೆಯಿಂದ ಸಂಪರ್ಕಿಸಿದಾಗ ಸದ್ರಿ ವಕೀಲರು ವ್ಯಕ್ತಿಯೋರ್ವ ತನ್ನ ಬಳಿ ಬಂದು ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ತನಗೆ ಮಾಹಿತಿ ಇರುವುದಾಗಿ ಹಾಗೂ ತಾನು ಪೊಲೀಸ್ ಠಾಣೆಗೆ ಶರಣಾಗಿ ಮಾಹಿತಿಯನ್ನು ನೀಡಲು ಸಿದ್ಧವಿರುವುದಾಗಿ ತಿಳಿಸಿರುತ್ತಾರೆ.

ಸದ್ರಿ ವ್ಯಕ್ತಿಗೆ ಅಗತ್ಯವಾದ ಕಾನೂನು ಸುರಕ್ಷತೆಯನ್ನು ಕಲ್ಪಿಸಿ ಆ ಬಳಿಕ ಆತನನ್ನು ಹಾಜರುಪಡಿಸುವುದಾಗಿ ವಕೀಲರು ತಿಳಿಸಿರುತ್ತಾರೆ. ಅದರಂತೆ ಸದ್ರಿ ವ್ಯಕ್ತಿ ಹಾಜರಾಗಿ ಮಾಹಿತಿ ನೀಡಿದಲ್ಲಿ ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್‌ ಇಲಾಖೆ ಪ್ರಕಟಣೆ ತಿಳಿಸಿದೆ.


Share with

Leave a Reply

Your email address will not be published. Required fields are marked *