ಖೈದಿಗಳ ನಡುವೆ ಹೊಡೆದಾಟ..! ಅಕ್ಷಯ್ ಕಲ್ಲೇಗ ಕೊಲೆ ಆರೋಪಿ ಕೇಶವ ಗಂಭೀರ ಗಾಯ

Share with

ಪುತ್ತೂರು :2023ರ ನ.6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣದ ಆರೋಪಿ ಕೇಶವ ಪಡೀಲ್ ಗೆ ಮಂಗಳೂರು ಜೈಲಿನಲ್ಲಿ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಮಂಗಳೂರಿನ ಕೊಡಿಯಾಲ್ ಬೈಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಗುರುವಾರ (ಜೂ.26) ಜೈಲಿನ ಒಳಗಡೆ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮುಖಾರ್ ಹಾಗೂ ಇತರೆ ಕೈದಿಗಳ ಮಧ್ಯೆ ಗಲಾಟೆಯಾಗಿದೆ. ಮುಖ್ತರ್ ರ್ ಮತ್ತೊಬ್ಬ ಕೈದಿ ಕೇಶವ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಕೇಶವನನ್ನು ವೆಸ್ಲಾಕ್ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.

ಬರ್ಕೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೈಲಿಗೆ ಬರ್ಕೆ ಠಾಣೆ ಪೊಲೀಸರು ಹಾಗೂ ಎಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Share with

Leave a Reply

Your email address will not be published. Required fields are marked *