ಕೇರಳದಲ್ಲಿ ನಿಫಾ ವೈರಸ್ ಪತ್ತೆ..!! ಮೂರು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

Share with

ತಿರುವನಂತಪುರಂ: ಕೇರಳದಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಶಂಕಿತ ನಿಫಾ ವೈರಸ್ ಲಕ್ಷಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳು ಶುಕ್ರವಾರ ಮೂರು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಿದ್ದಾರೆ.

ಕೋಯಿಕ್ಕೋಡ್, ಮಲಪ್ಪುರಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ ವೈರಸ್ ಕುರಿತಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೋಯಿಕ್ಕೋಡ್ ಮತ್ತು ಮಲಪ್ಪುರಂನ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ನಿಯಮಿತ ಪರೀಕ್ಷೆಯ ಸಮಯದಲ್ಲಿ ಮಲಪ್ಪುರಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಿಂದ ಬಂದಿದ್ದ ಇಬ್ಬರಲ್ಲಿ ಶಂಕಿತ ನಿಫಾ ವೈರಸ್ ಲಕ್ಷಣಗಳನ್ನು ಗುರುತಿಸಲಾಗಿದೆ.

ದೃಢೀಕರಣಕ್ಕಾಗಿ ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಮಾದರಿಗಳನ್ನು ರವಾನಿಸಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

” ನಾವು ಈಗಾಗಲೇ ನಿಫಾ ಪ್ರೋಟೊಕಾಲ್‌ಗೆ ಅನುಗುಣವಾಗಿ ಕ್ರಮಗಳನ್ನು ಬಲಪಡಿಸಿದ್ದೇವೆ’ಎಂದು ತುರ್ತು ಸಭೆ ನಡೆಸಿದ ನಂತರ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಸಂಪರ್ಕ ಪತ್ತೆಹಚ್ಚುವಿಕೆ, ರೋಗಲಕ್ಷಣಗಳನ್ನು ಮೇಲ್ವಿಚಾರಣೆ ಮಾಡುವುದು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರತಿ ಕೋಯಿಕ್ಕೋಡ್, ಮಲಪ್ಪುರಂ ಮತ್ತು ಪಾಲಕ್ಕಾಡ್ ಜಿಲ್ಲೆಗಳಲ್ಲಿ 26 ವಿಶೇಷ ತಂಡಗಳನ್ನು ರಚಿಸಲಾಗಿದೆ.

ಸಾರ್ವಜನಿಕರ ನೆರವಿಗಾಗಿ ರಾಜ್ಯಮಟ್ಟದ ಮತ್ತು ಸ್ಥಳೀಯ ಸಹಾಯವಾಣಿಗಳನ್ನು ಸ್ಥಾಪಿಸಲಾಗುತ್ತಿದೆ.

ಇತ್ತೀಚಿನ ವಾರಗಳಲ್ಲಿ ಯಾವುದೇ ಅಸ್ವಾಭಾವಿಕ ಅಥವಾ ವಿವರಿಸಲಾಗದ ಸಾವುಗಳು ಸಂಭವಿಸಿವೆಯೇ ಎಂದು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.


Share with

Leave a Reply

Your email address will not be published. Required fields are marked *