ಪ್ರಸಿದ್ಧ ಅಂತಾರಾಷ್ಟ್ರೀಯ ಅಂಪೈರ್ ಬಿಸ್ಮಿಲ್ಲಾ ಜಾನ್ ಶಿನ್ವಾರಿ (41) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಹಲೋಕ ತ್ಯಜಿಸಿದರು ಎಂದು ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿದೆ. ಅನೇಕ ಕ್ರಿಕೆಟಿಗರು ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸುತ್ತಿದ್ದಾರೆ.


ಶಿನ್ವಾರಿ 1984ರಲ್ಲಿ ಅಫ್ಘಾನ್‌ನಲ್ಲಿ ಜನಿಸಿದರು. ಅವರು ತಮ್ಮ ವೃತ್ತಿ ಜೀವನದಲ್ಲಿ 60 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಅಂಪೈರ್/ಟಿವಿ ಅಂಪೈರ್ ಆಗಿ ಕೆಲಸ ಮಾಡಿದ್ದಾರೆ. ಇದರಲ್ಲಿ 34 ODI & 26 T20ಗಳು ಸೇರಿವೆ.




