JDS ಮುಖಂಡ HT ರಾಜೇಂದ್ರ (72) ನಿಧನರಾಗಿದ್ದಾರೆ. NR ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಪರಿಷತ್ ಸದಸ್ಯರಾಗಿ, ಜಿಲ್ಲೆಯ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ, JDS ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು, ಶೃಂಗೇರಿ ವಿಧಾನಸಭಾ ಕ್ಷೇತ್ರದ JDS ಅಭ್ಯರ್ಥಿಯಾಗಿ 3 ಬಾರಿ ಸ್ಪರ್ಧಿಸಿದ್ದರು.


ದೇವೇಗೌಡರ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಜನಪರ ರಾಜಕಾರಣದ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದರು.




