ಮಂಗಳೂರು: ರಾಜ್ಯ ಸರಕಾರದ ಜನ ವಿರೋಧಿ ನಡೆಯಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಂಪುಕಲ್ಲು ಮತ್ತು ಮರಳು ಅಲಭ್ಯವಾಗಿದೆ. ಇದರಿಂದ ನಿರ್ಮಾಣ ಕಾಮಗಾರಿಗಳು ಸಂಪೂರ್ಣ ಸ್ಥಗಿತ ಗೊಂಡಿದ್ದು, ಕಟ್ಟಡ ನಿರ್ಮಾಣ ಕಾರ್ಮಿಕರು, ಲಾರಿ ಚಾಲಕರು ಹಾಗೂ ಮಾಲಕರು, ಸ್ವಂತ ಸೂರು ಕಟ್ಟಿಕೊಳ್ಳಲು ಹೊರಟಿರುವ ಬಡ ಜನರು ತೀರ ಸಂಕಷ್ಟಕ್ಕೊಳಗಾಗಿದ್ದಾರೆ. ಹಾಗಾಗಿ ಜಿಲ್ಲೆಯ ಜನ ಬೀದಿಗಿಳಿಯುವುದು ಅನಿವಾರ್ಯವಾಗಿದ್ದು, ಜು.14ರಂದು ಜಿಲ್ಲೆಯಾದ್ಯಂತ ಎಲ್ಲ ತಾಲೂಕು ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯುತ್ತಿದೆ.





