ನ್ಯಾಯಾಂಗ ನಿಂದನೆ ಕೇಸ್ನಲ್ಲಿ ಕೇಂದ್ರ ಸಚಿವ HD ಕುಮಾರಸ್ವಾಮಿಗೆ ರಿಲೀಫ್ ಸಿಕ್ಕಿದೆ. ಬಿಡದಿ ಬಳಿ ಕೇತಗಾನಹಳ್ಳಿಯಲ್ಲಿ ಜಮೀನು ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ಡಿಕೆ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಎಚ್ಡಿಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ದ್ವಿಸದಸ್ಯ ಪೀಠ, ಮುಂದಿನ ಆದೇಶದವರೆಗೂ ಎಚ್ಡಿಕೆ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶಿಸಿದೆ.




