ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಲೀಕ್ ಆಗಿ, ಕ್ಷಣಾರ್ಧದಲ್ಲೇ ಸಿಲಿಂಡರ್ ಸ್ಫೋಟಗೊಂಡಿದೆ. ಈ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಂಭವಿಸಿದೆ. ಮುಂಜಾಗ್ರತ ಕ್ರಮವಾಗಿ ವಿದ್ಯಾರ್ಥಿಗಳಿಗೆ ಇಂದು ರಜೆ ಘೋಷಿಸಿ, ಶಾಲೆಯಲ್ಲಿಯೇ ಬ್ಯಾಗ್ ಬಿಟ್ಟು ಮಕ್ಕಳಿಗೆ ಮನೆಗೆ ತೆರಳುವಂತೆ ಸೂಚಿಸಲಾಗಿತ್ತು.

ಹೀಗಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಶಾಲೆಯ ಅಡುಗೆ ಕೋಣೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




