ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆರ್ ಆರ್ ನಗರ, ಕೆಂಗೇರಿ ಸೇರಿದಂತೆ ಒಟ್ಟು 40 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಕಿಡಿಗೇಡಿಗಳು ಬೆದರಿಕೆ ಸಂದೇಶ ಕಳುಹಿಸಿದ್ದಾರೆ.

ವಿಷಯ ತಿಳಿದ ತಕ್ಷಣ ಎಲ್ಲ ಶಾಲೆಗಳಿಗೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅತ್ತ ದೆಹಲಿಯಲ್ಲೂ ಹತ್ತು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಲ್ಲೂ ಭದ್ರತಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.




