ಜು.26: ಕೊಂಡೆವೂರು ನಿತ್ಯಾನಂದ ಯೋಗಾಶ್ರಮ ಮಠದಲ್ಲಿ “ಕಾರ್ಗಿಲ್ ವಿಜಯ ದಿವಸ್”

Share with

ಕಾಸರಗೋಡು: ಉಪ್ಪಳ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠದ ಪ್ರಯುಕ್ತ ಕಾರ್ಗಿಲ್ ವಿಜಯ್ ದಿವಸ್ ಜುಲೈ 26, ಬೆಳಗ್ಗೆ 10 ರಿಂದ ಶ್ರೀ ಗಾಯತ್ರಿ ಮಂಟಪದಲ್ಲಿ ಜರಗಲಿದೆ.

ಕಾರ್ಯಕ್ರಮದಲ್ಲಿ ಕೊಂಡೆವೂರು ಮಠದ ಯೋಗಾನಂದ ಸರಸ್ವತೀ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಲಿದ್ದಾರೆ.

ಇದೇ ವೇಳೆ ಯೋಧರಿಗೆ ಸನ್ಮಾನ ಹಾಗೂ ವಿದ್ಯಾಪೀಠದ ವಿದ್ಯಾರ್ಥಿಗಳಿಂದ ನೃತ್ಯ ರೂಪಕ ನೆರವೇರಲಿದೆ ಎಂದು ಕೊಂಡೆವೂರು ಮಠ ಪ್ರಕಟಣೆಯಲ್ಲಿ ತಿಳಿಸಿದೆ.


Share with

Leave a Reply

Your email address will not be published. Required fields are marked *