ಪ್ರತಿದಿನ ಬೆಳಗಿನ ನಡಿಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಶೀತ, ಕೆಮ್ಮು, ಜ್ವರ ಮತ್ತು ಇತರ ಸೋಂಕುಗಳ ಅಪಾಯ ಕಡಿಮೆ ಮಾಡುತ್ತದೆ.
ಪ್ರತಿದಿನ ಕನಿಷ್ಠ 20 ನಿಮಿಷಗಳ ಕಾಲ ವಾಕಿಂಗ್ ಮಾಡುವ ಜನರು ಇತರರಿಗೆ ಹೋಲಿಸಿದರೆ ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ 43% ಕಡಿಮೆ ಎಂದು ಹಲವಾರು ಅಧ್ಯಯನಗಳು ಬಹಿರಂಗಪಡಿಸಿವೆ. ಬೆಳಗಿನ ನಡಿಗೆ ಹೃದಯವನ್ನು ಆರೋಗ್ಯವಾಗಿರಿಸುವುದಲ್ಲದೆ, BPಯನ್ನೂ ನಿಯಂತ್ರಣದಲ್ಲಿರುತ್ತದೆ. ಜೊತೆಗೆ ಮನಸ್ಸು ಮತ್ತು ದೇಹದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ.