ಧರ್ಮಸ್ಥಳದಲ್ಲಿ ನಿಗೂಢವಾಗಿ ನಡೆದಿರುವ ಕೊಲೆಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರ ಈಗಾಗಲೇ SIT ರಚನೆ ಮಾಡಿದೆ. ಈ ಬಗ್ಗೆ ತನಿಖೆ ನಡೆಸಿ ಶೀಘ್ರವೇ ವರದಿ ನೀಡುವಂತೆ ಆದೇಶ ಹೊರಡಿಸಿದೆ.

ಇದೀಗ ಈ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದು, ಸದ್ಯದಲ್ಲೇ ಧರ್ಮಸ್ಥಳಕ್ಕೆ SIT ಭೇಟಿ ನೀಡಲಿದೆ. ಈ ತನಿಖಾ ತಂಡದಿಂದ ಯಾವುದೇ ಅಧಿಕಾರಿ ಹೊರಗೆ ಉಳಿಯುವುದಿಲ್ಲ. ಈ ತನಿಖೆಯಿಂದ ಹೊರಗೆ ಉಳಿಯೋದಾದರೆ ನಮಗೆ ತಿಳಿಸಲಿ. ಆ ನಂತರ ಅದರ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.




