ಮಾಲ್ಡೀವ್ಸ್ ನ 60ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಎರಡು ವರ್ಷಗಳಿಂದ ಭಾರತ ಹಾಗೂ ಮಾಲ್ಡೀವ್ಸ್ ಸಂಬಂಧ ತೀರಾ ಹದಗೆಟ್ಟಿತ್ತು.

ನೇರವಾಗಿಯೇ ಅಲ್ಲಿನ ಸಚಿವರು ಪ್ರಧಾನಿ ಮೋದಿ ವಿರುದ್ಧ ಅಪಪ್ರಚಾರ ಮಾಡಿದ್ದರು. ಈ ಬಳಿಕ ಮಾಲ್ಡೀವ್ಸ್ ಗೆ ಭೇಟಿ ನೀಡುವ ಪ್ರವಾಸಿಗರಲ್ಲಿ ಗಣನೀಯ ಇಳಿಕೆ ಕಂಡುಬಂದಿತ್ತು. ಸದ್ಯ ಪ್ರಧಾನಿ ಮೋದಿಗೆ ವಿಶೇಷ ಆಹ್ವಾನ ನೀಡಿರುವ ಮಾಲ್ಡೀವ್ಸ್ ತಮ್ಮ ಸಂಬಂಧವನ್ನು ಗಟ್ಟಿಗೊಳಿಸಲು ಯತ್ನಿಸಲಿದೆ.




