ಜು.28ರ ತನಕ ಕೇರಳದಲ್ಲಿ ಭಾರೀ ಗಾಳಿ ಮಳೆಯ ಮುನ್ಸೂಚನೆ..; ಮೀನುಗಾರರಿಗೆ ತೆರಳದಂತೆ ಮುನ್ಸೂಚನೆ

Share with

ತಿರುವನಂತಪುರಂ: ಮುಂದಿನ ದಿನಗಳಲ್ಲಿ ಕೇರಳ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿದೆ.

ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ ಜುಲೈ 24 ರಿಂದ ಜುಲೈ 28 ರವರೆಗೆ ಕೇರಳ ಭಾಗದಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು ಅದರಂತೆ ಮೀನುಗಾರರು ಈ ಅವಧಿಯಲ್ಲಿ ಮೀನುಗಾರಿಕೆ ನಡೆಸದಂತೆ ಅಲ್ಲದೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಇದರ ಜೊತೆಗೆ ಸಮುದ್ರ ತೀರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ(IMD) ಮತ್ತು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ಜಂಟಿಯಾಗಿ ಮುನ್ಸೂಚನೆಯನ್ನು ಹೊರಡಿಸಿದ್ದು ಅದರ ಮಾಹಿತಿಯಂತೆ ಜುಲೈ 28 ರ ಭಾನುವಾರದವರೆಗೆ ಕೇರಳ-ಕರ್ನಾಟಕ-ಲಕ್ಷದ್ವೀಪ ಕರಾವಳಿಯಲ್ಲಿ ಮೀನುಗಾರಿಕೆ ಚಟುವಟಿಕೆಯನ್ನು ನಿಷೇಧಿಸಲಾಗಿದೆ.ಜೊತೆಗೆ ಸಮುದ್ರ ದೊಡ್ಡ ದೊಡ್ಡ ಅಲೆಗಳು ದಡಕ್ಕೆ ಅಪ್ಪಳಿಸುವ ಸಾಧ್ಯತೆ ಇದ್ದು ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಜೊತೆಗೆ ಸ್ಥಳೀಯರು ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಿದೆ.

ಇಂದು 8 ಜಿಲ್ಲೆಗಳಿಗೆ ಹಳದಿ ಅಲರ್ಟ್:

ಗುರುವಾರ (ಜು.24) ಪಟ್ಟಣಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಸೇರಿ ಎಂಟು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಈ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಜುಲೈ 25 ರಂದು 5 ಜಿಲ್ಲೆಗೆ ಆರೆಂಜ್ ಅಲರ್ಟ್‌:

ಶುಕ್ರವಾರ (ಜುಲೈ 25) ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ ಮತ್ತು ತ್ರಿಶೂರ್ ಸೇರಿ ಐದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು ಈ ಅಂದು 115.6 2 2 204.4 ಮಳೆಯಾಗುವ ಮುನ್ಸೂಚನೆ ಇದೆ.

ಜುಲೈ 26 ರಿಂದ ಎರಡು ದಿನ ಯೆಲ್ಲೋ ಅಲರ್ಟ್‌:

ತಿರುವನಂತಪುರಂ, ಕೊಲ್ಲಂ, ಮಲಪ್ಪುರಂ, ಪಾಲಕ್ಕಾಡ್ ಮತ್ತು ಇತರ ಜಿಲ್ಲೆಗಳಿಗೆ ಜುಲೈ 27 ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಸಾರ್ವಜನಿಕರಿಗೆ ಸೂಚನೆ :

ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದು ಅದರಂತೆ ಅಪಾಯಕಾರಿ ಸ್ಥಳಗಳಿಗೆ ಪ್ರವಾಸಿಗರು ಹಾಗೂ ಸಾರ್ವಜನಿಕರು ತೆರಳದಂತೆ ಸೂಚನೆ ನೀಡಿದೆ.ಸಮುದ್ರದಲ್ಲಿ ದೊಡ್ಡ ದೊಡ್ಡ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಸಮುದ್ರ ತೀರದ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.

ಮರಗಳು, ವಿದ್ಯುತ್ ಕಂಬಗಳು ಜೊತೆಗೆ ಶಿಥಿಲಗೊಂಡಿರುವ ಗೋಡೆಗಳ ಬಳಿ ವಾಹನಗಳನ್ನು ನಿಲುಗಡೆ ಮಾಡದಂತೆ ಸೂಚನೆ.

ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಪಾಲಿಸುವಂತೆ ಸೂಚಿಸಿದೆ.


Share with

Leave a Reply

Your email address will not be published. Required fields are marked *