ಕೊಪ್ಪಳ ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರದ ಕೊರತೆಯಿಂದ ಎಲ್ಲ ರಸಗೊಬ್ಬರ ಅಂಗಡಿಗಳಲ್ಲಿ ನೋ ಸ್ಟಾಕ್ ಎಂದು ಬೋರ್ಡ್ ಹಾಕಲಾಗಿದೆ. ಇದರಿಂದ ಬೇಸತ್ತ ಕುಣಿಕೆರಿ ತಾಂಡಾ ನಿವಾಸಿ ಬಸಪ್ಪ ಬಡಿಗಿ ಮಣ್ಣು ತಿಂದು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿ ವಿಪಕ್ಷ ನಾಯಕ R.ಅಶೋಕ್, ಅನ್ನ ನೀಡುವ ರೈತರಿಗೆ ಮಣ್ಣು ಮುಕ್ಕಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ. ಅನ್ನದಾತರ ಶಾಪ ಈ ಸರ್ಕಾರಕ್ಕೆ ತಟ್ಟದೇ ಇರದು ಎಂದು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.




