ಅಕ್ಷಯ ಕಾಲೇಜಿನಲ್ಲಿ ಗ್ರಂಥಪಾಲಕರ ದಿನಾಚರಣೆ ಹಾಗೂ ಪುಸ್ತಕ ಪ್ರದರ್ಶನ

Share with

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಆ.18ರಂದು IQAC & Library Information Science ಇದರ ಜಂಟಿ ಸಹಯೋಗದಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಪುತ್ತೂರು ಧನ್ವಂತರಿ ಆಯುರ್ವೇದಿಕ್ ಕ್ಲಿನಿಕ್‌ನ ವೈದ್ಯರಾದ ಡಾ. ಶ್ಯಾಮ್‌ಪ್ರಸಾದ್ ಎಂ ಇವರು ಉದ್ಘಾಟಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳು ಒದುವ ಅಭ್ಯಾಸವನ್ನು ಹವ್ಯಾಸವಾಗಿ ಮಾಡಿಕೊಳ್ಳದೇ, ನಿರಂತರವಾಗಿ ರೂಢಿಸಿಕೊಳ್ಳಬೇಕೆಂದು ಹೇಳಿದರು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮಾಜಿ ಕಾಲೇಜು ಶಿಕ್ಷಣ ಇಲಾಖೆ ಲೈಬ್ರೆರಿಯನ್ ಪ್ರೊ. ರಾಮಚಂದ್ರ ಮಾತನಾಡಿ ಡಾ.ಎಸ್.ಆರ್ ರಂಗನಾಥನ್ ಅವರ ಜನ್ಮದಿನವನ್ನು ಗ್ರಂಥಪಾಲಕರ ದಿನಾಚರಣೆಯಾಗಿ ಯಾವ ಕಾರಣಕ್ಕೆ ಆಚರಿಸಲಾಗುತ್ತದೆ, ಹಾಗೂ ರಂಗನಾಥನ್ ಅವರ ಜೀವನ ಶೈಲಿ, ಗ್ರಂಥಾಲಯಗಳಿಗೆ ಅವರ ಕೊಡುಗೆಯ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡಿ, ವಿದ್ಯಾರ್ಥಿಗಳು ಗ್ರಂಥಾಲಯವನ್ನು ಅತೀ ಹೆಚ್ಚು ಉಪಯೋಗಿಸಿಕೊಂಡು ಜ್ಞಾನಾರ್ಜನೆ ಮಾಡಿದರೆ, ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಬಹುದು ಎಂದರು. ಗಂಥಪಾಲ ದಿನದ ಪ್ರಯುಕ್ತ ನಡೆಸಿದ ಪುಸ್ತಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮನ್ವಿತ್ ಹಾಗೂ ದ್ವಿತೀಯ ಸ್ಥಾನ ಗಳಿಸಿದ ರಾಕೇಶ್ ಮತ್ತು ಜ್ಞಾಪಕ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ರಕ್ಷಿತ್ ಹಾಗೂ ದ್ವಿತೀಯ ಸ್ಥಾನ ಗಳಿಸಿದ ರ‍್ಷಿತ್ ಇವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಅಕ್ಷಯ ಕಾಲೇಜಿನ ಅಧ್ಯಕ್ಷ ಜಯಂತ್ ನಡುಬೈಲ್ ಇವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಓದುವ ಅಭ್ಯಾಸ ಮೈಗೂಡಿಸಿಕೊಂಡು ಮೊಬೈಲ್ ಹಾಗೂ ಸಾಮಾಜಿಕ ಜಾಲಾತಾಣಗಳ ಬಳಕೆಯನ್ನು ಮಿತವಾಗಿರಿಸಿ, ಪುಸ್ತಕಗಳ ಮೇಲೆ ಪ್ರೀತಿ ಬೆಳೆಸಿಕೊಳ್ಳಿ ಎಂದರು. ಕಾರ್ಯಕ್ರಮದ ನಂತರ ಕಾಲೇಜಿನ ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಹಾಗೂ ಗ್ರಂಥಪಾಲಕಿ ಪ್ರಭಾವತಿ ಉಪಸ್ಥಿತರಿದ್ದರು. ಉಪನ್ಯಾಸಕಿ ಸೌಜನ್ಯ ಸ್ವಾಗತಿಸಿ,IQAC ಸಂಯೋಜಕರಾದ ರಾಕೇಶ್ ಕುಲದಪಾರೆ ವಂದಿಸಿದರು. ಉಪನ್ಯಾಸಕ ಕಿಶನ್ ರಾವ್ ಕಾರ್ಯಕ್ರಮ ನಿರೂಪಿಸಿದರು.


Share with

Leave a Reply

Your email address will not be published. Required fields are marked *