ಬೆಂಗಳೂರು: ರಾಜಧಾನಿ ಬೆಂಗಳೂರಿನ ಸೂಳದೇವನಹಳ್ಳಿಯಲ್ಲಿ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಆರೋಪಿಯನ್ನು ಅಷ್ರಫ್ ಎಂದು ತಿಳಿದು ಬಂದಿದೆ.

ಮಹಿಳಾ ವಿದ್ಯಾರ್ಥಿನಿ 10 ದಿನಗಳ ಹಿಂದೆ PGಗೆ ಬಂದು ತಂಗಿದ್ದರು. ನಿನ್ನೆ ರಾತ್ರಿ ಪಿಜಿ ಮಾಲೀಕ ಆಷ್ರಫ್ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.
ಪೋಷಕರ ಸಹಾಯದಿಂದ ಯುವತಿ ಸೂಳದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯಾದ ಆಷ್ರಫ್‍ನ್ನು ಬಂಧಿಸಿದ್ದಾರೆ.
ಈ ಕುರಿತು ಸೂಳದೇವನಹಳ್ಳಿ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.




