ಬಂಟ್ವಾಳ: ಫರಂಗಿಪೇಟೆ ಬಳಿಯ ಮನೆಯೊಂದರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋಮಾಂಸ ಅಡ್ಡೆಗೆ ಆ.9ರ ರವಿವಾರ ಬಂಟ್ವಾಳ ಗ್ರಾಮಾಂತರ ಪೊಲೀಸರ ತಂಡ ದಾಳಿ ನಡೆಸಿದೆ.

ಮಾರಿಪಳ್ಳದಲ್ಲಿ ಹಸನಬ್ಬ ಎಂಬಾತ ಆತನ ಮನೆಯಲ್ಲಿ ಅಕ್ರಮವಾಗಿ ಹಸುಗಳನ್ನು ಕಡಿಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇಂದು (ಆ.10ರ) ಮುಂಜಾನೆ 5 ಗಂಟೆ ವೇಳೆ ದಾಳಿ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಸನಬ್ಬನ ಜೊತೆ ಮತ್ತೊಬ್ಬ ವ್ಯಕ್ತಿ ಸೇರಿಕೊಂಡು ಹಸುಗಳನ್ನು ಕಡಿದು ಮಾಂಸ ಮಾಡಿ ಮಾರಟ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪೊಲೀಸರ ದಾಳಿ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಆರೋಪಿಗಳು ಒಂದು ದನವನ್ನು ಕಡಿದು ಮಾಂಸ ಮಾಡಲು ತಯಾರಿಯಲ್ಲಿದ್ದರು. ಪೊಲೀಸರು ಬರುವುದನ್ನು ಕಂಡು ಇಬ್ಬರು ಓಡಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಹೆಚ್ಚಿನ ಮಾಹಿತಿಯನ್ನು ಪೊಲೀಸರು ನೀಡಬೇಕಿದ್ದು, ಸ್ಥಳದಲ್ಲಿದ್ದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.




