ಮಂಗಳೂರು: ನೀರಿನೊಳಗೆ ಉಸಿರು ಬಿಗಿ ಹಿಡಿದು ಸೋಮರ್‌ಸಾಲ್ಟ್ ಮತ್ತು ಆಸನಗಳನ್ನು ಪ್ರದರ್ಶಿಸಿ ‘ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್’ನಲ್ಲಿ ಸ್ಥಾನ ಪಡೆದಿದ್ದ ಈಜುಪಟು ಕೆ. ಚಂದ್ರಶೇಖರ ರೈ ಸೂರಿಕುಮೇರು (52) ಈಜುಕೊಳದಲ್ಲಿ ಮುಳುಗಿ ಭಾನುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಸಮೀಪದ ಸೂರಿಕುಮೇರು ಬರಿಬರದ ನಿವಾಸಿಯಾದ ಅವರು ಮಂಗಳೂರಿನ ಕುದ್ರೋಳಿಯಲ್ಲಿ ವಾಸವಾಗಿದ್ದರು. ಅವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ.




