ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಯುತ್ತಿದೆ ಎಂದು ವಿಪಕ್ಷ ಬಿಜೆಪಿ ಆರೋಪಿಸಿದೆ. ಈ ಸಂಬಂಧ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

ಧರ್ಮಸ್ಥಳ ವಿಚಾರದಲ್ಲಿ ನಾನಾ ತಂಡಗಳು ಕಾರ್ಯನಿರ್ವಹಿಸುತ್ತಿದ್ದು, ಆ ತಂಡಗಳಿಗೆ ಫಾರಿನ್ ಫಂಡ್ ಬಂದಿದೆ. ಹೀಗಾಗಿ ಇಡಿ ತನಿಖೆ ನಡೆಸಬೇಕೆಂದು ಅಮಿತ್ ಶಾಗೆ ಬರೆದ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.




