SIT ಅಧಿಕಾರಿಗಳಿಂದ ಮಾಸ್ಕ್ ಮ್ಯಾನ್ ಬಂಧನ

Share with

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಹೊಸ ತಿರುವು ಸಿಗುತ್ತಿದೆ. ಹಲವು ವರ್ಷಗಳ ಹಿಂದೆ ಶವಗಳನ್ನು ತಾನು ಹೂತಿದ್ದೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿ ಎಸ್ ಐಟಿ ಅಧಿಕಾರಿಗಳ ಮುಂದೆ ಶೋಧಕಾರ್ಯಕ್ಕೆ ಹೋಗುತ್ತಿದ್ದ ಮುಖವಾಡ ತೊಟ್ಟ ಅನಾಮಿಕನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

ಸುಳ್ಳು ಮಾಹಿತಿ ನೀಡಿದ್ದ ಆರೋಪದಡಿ ಬಂಧಿಸಲಾಗಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಕೋರ್ಟ್​ಗೆ ಎಸ್​ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ.

ಸಾಕ್ಷಿ ಸಂರಕ್ಷಣಾ ಯೋಜನೆಯಡಿ ರಕ್ಷಣೆ ಪಡೆದಿದ್ದ ಅನಾಮಿಕ ದೂರುದಾರನನ್ನು ಎಸ್‌ಐಟಿ ಬಂಧಿಸಿದೆ. ದೂರಿನಲ್ಲಿ ಸುಳ್ಳು ಮಾಹಿತಿ ಮತ್ತು ತನಿಖೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಹೊಸ ಎಫ್‌ಐಆರ್ ದಾಖಲಾಗಿದೆ. ಸಮಾಧಿ ಸ್ಥಳಗಳಲ್ಲಿ ಅಸ್ತಿಪಂಜರಗಳು ಪತ್ತೆಯಾಗಿಲ್ಲ. ಬಂಧಿತನ ವಿಚಾರಣೆ ಮುಂದುವರೆದಿದೆ.


Share with

Leave a Reply

Your email address will not be published. Required fields are marked *