ಮಂಗಳೂರು: ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬಾಲಕಿ ಸೇರಿ ಆರು ಮಂದಿ ಸಾವನ್ನಪ್ಪಿದ್ದು, 7 ಜನರು ಗಾಯಗೊಂಡಿರುವ ದುರ್ಘಟನೆ ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯಲ್ಲಿ ನಡೆದಿದೆ.

ಇಲ್ಲಿನ ಉಳ್ಳಾಲದ ತಲಪಾಡಿ ಟೋಲ್ ಗೇಟ್ ಬಳಿ ಇಂದು ಮಧ್ಯಾಹ್ನ ಬಸ್ ಆಟೋಗೆ ಗುದ್ದಿದ್ದು, ಮಗು ಸೇರಿ ಆರು ಜನರು ಸಾವನ್ನಪ್ಪಿದ್ದಾರೆ. ಕೆಸಿ ರೋಡ್ನಿಂದ ತೆರಳುತ್ತಿದ್ದ ಆಟೋ ರಿಕ್ಷಾ ಹಾಗೂ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಬಸ್ಸುಇದ್ದಕಿದ್ದಂತೆ ಆಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಬಸ್ ಚಾಲಕನ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎನ್ನಲಾಗಿದೆ. ಈ ಸಂಬಂಧ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




