ವಿಜಯಪುರ: ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಅವಘಡ ಸಂಭವಿಸಿ ಓರ್ವ ಮೃ*ತಪಟ್ಟು, ಇನ್ನಿಬ್ಬರು ಗಾಯಗೊಂಡ ಘಟನೆ ನಗರದ ಗಾಂಧಿ ಚೌಕ್‌ನಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ.

ನಗರದ ಡೋಬಲೆ ಗಲ್ಲಿ ನಿವಾಸಿ ಶುಭಂ ಸಂಕಳ (21) ಮೃತ ದುರ್ದೈವಿ. ಪ್ರಭಾಕರ ಜಂಗಲೆ ಹಾಗೂ ಲಖನ್ ಚವ್ಹಾಣ ಎಂಬುವ ವರು ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳವಾರ ಏಳನೇ ದಿನದ ಗಣೇಶನ ಮೂರ್ತಿಗಳ ವಿಸರ್ಜನೆ ಮೆರವಣಿಗೆ ನಡೆಯುತ್ತಿತ್ತು. ಬುಧವಾರ ಬೆಳಗಿನ ಜಾವದವರೆಗೂ ಮೆರವಣಿಗೆ ಸಾಗಿದ್ದು, ಗಾಂಧಿ ಚೌಕ್ ನ ಟಾಂಗಾ ಸ್ಟ್ಯಾಂಡ್ ಬಳಿ ಜೆಡಿ ಸಾಗಲು ಕೋಲಿನಿಂದ ವಿದ್ಯುತ್ ತಂತಿ ಎತ್ತುವ ವೇಳೆ ವಿದ್ಯುತ್ ಶಾಕ್‌ನಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.




