ಮಂಡ್ಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟವನ್ನು ಖಂಡಿಸಿ, ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಇದೀಗ ಲಾಠಿ ಏಟು ತಿಂದ, ಮದ್ದೂರು ಶಿವಪುರ ನಿವಾಸಿ ಜ್ಯೋತಿ ವಿರುದ್ಧ ಮದ್ದೂರು ಠಾಣಾ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.

ಸಿದ್ದರಾಮಯ್ಯ & ಮುಸ್ಲಿಂರ ವಿರುದ್ಧ ಅವಹೇಳನಕಾರಿ ಹೇಳಿಕೆ, ಅನ್ಯಧರ್ಮಕ್ಕೆ ಧಕ್ಕೆಯಾಗುವ ಪದ ಬಳಕೆ, ಕೋಮುಗಳ ನಡುವೆ ಪರಸ್ಪರ ವೈಮನಸ್ಸು ಉಂಟು ಮಾಡುವ ಹೇಳಿಕೆ ನೀಡಿದ ಆರೋಪದಡಿ FIR ದಾಖಲಾಗಿದೆ.




