ಪುತ್ತೂರು: ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೊಳಪಟ್ಟ ಬಾಲಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದು, ಆಸ್ಪತ್ರೆಯೆ ನಿರ್ಲಕ್ಷವೇ ಕಾರಣವೆಂದು ಆರೋಪಿಸಿ ಕಟುಂಬಸ್ಥರು ಸಹಿತ ದಲಿತ ಸೇವಾ ಸಮಿತಿಯವರು ಬಾಲಕನ ಮೃತದೇಹವನ್ನು ಆಸ್ಪತ್ರೆಗ ಮುಂಭಾಗದಲ್ಲಿಟ್ಟು ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ಸ್ಥಳಕ್ಕೆ ತಹಸೀಲ್ದಾರ್ ಸ್ಥಳಕ್ಕಾಗಮಿಸಿ ಕುಟುಂಬಸ್ಥರ ಮನವಿ ಸ್ವೀಕರಿಸಿದ್ದಾರೆ. ಬಳಿಕ ಧರಣಿ ನಿರತರು ತಮ್ಮ ಧರಣಿ ಹಿಂಪಡೆದರು.