ನಕಲಿ ವೀಡಿಯೋ ಹರಿಬಿಟ್ಟ ಯುವತಿ ಶಹಾ ಜಹಾನ್ ಬಂಧನ

Share with

ಬೆಂಗಳೂರು: ಎರಡು ವರ್ಷಗಳ ಹಿಂದೆ ಉತ್ತರ ಪ್ರದೇಶದಲ್ಲಿ ನಡೆದಿದ್ದ ಘಟನೆ ವಿಡಿಯೋವನ್ನು “ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ’ ಎಂಬ ಶೀರ್ಷಿಕೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಯುವತಿಯನ್ನು ಪುಲಕೇಶಿನಗರ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಕೋಣನಕುಂಟೆ ನಿವಾಸಿ ಶಹಾ ಜಹಾನ್ (36) ಎಂಬ ಯುವತಿಯನ್ನು ಬಂಧಿಸಿ, ಬಳಿಕ ಹೇಳಿಕೆ ದಾಖಲಿಸಿಕೊಂಡು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ವಿಡಿಯೋ, ಫೋಟೋ ಹಾಗೂ ಸುದ್ದಿಗಳನ್ನು ತನ್ನ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದ ಶಹಜಹಾನ್, ಉತ್ತರ ಪ್ರದೇಶದ ಕಾಲ್ಪುರದಲ್ಲಿ ನಡೆದಿದ್ದ ಹಳೆಯ ಘಟನೆಯೊಂದರ ವಿಡಿಯೋವನ್ನು “ಬೆಂಗಳೂರಿನಲ್ಲಿ ರೌಡಿಗಳ ಅಟ್ಟಹಾಸ’ ಎಂಬ ಶೀರ್ಷಿಕೆಯ ಅಡಿ ಸೆ.6ರಂದು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದರು. ಸಾಮಾಜಿಕ ಜಾಲತಾಣಗಳ ನಿರ್ವಹಣಾ ವಿಭಾಗದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ವಿಡಿಯೋ ಪರಿಶೀಲಿಸಿದಾಗ ಅದು ಬೆಂಗಳೂರಿನಲ್ಲಿ ನಡೆದ ಘಟನೆಯ ಅಲ್ಲ ಎಂಬುದು ಖಚಿತ ಪಡಿಸಿಕೊಂಡಿದ್ದಾರೆ. ಬಳಿಕ ಸುಳ್ಳು ವಿಡಿಯೋ ಹಂಚಿಕೊಂಡ ಆರೋಪದ ಮೇರೆಗೆ ಶಹಜಹಾನ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ನಡಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.


Share with

Leave a Reply

Your email address will not be published. Required fields are marked *