ಗಾಯಕ ಎಂ. ವೆಂಕಟೇಶ್ ಕುಮಾರ್ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’ಗೆ ಆಯ್ಕೆ

Share with

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಸಂದರ್ಭದಲ್ಲಿ ಸಂಗೀತ ಸಾಧಕರಿಗೆ ರಾಜ್ಯ ಸರ್ಕಾರ ನೀಡುವ 2025ನೇ ಸಾಲಿನ ‘ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ’ಗೆ ಹಿಂದೂಸ್ತಾನಿ ಗಾಯಕ ಎಂ. ವೆಂಕಟೇಶ್ ಕುಮಾರ್ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 5 ಲಕ್ಷ ನಗದು, ಸರಸ್ವತಿ ವಿಗ್ರಹ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ವೈ.ಕೆ. ಮುದ್ದುಕೃಷ್ಣ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಮೈಸೂರು ಅರಮನೆಯ ಮುಖ್ಯ ವೇದಿಕೆಯಲ್ಲಿ ಇದೇ 22ರಂದು ನಡೆಯುವ ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

‘ಅದ್ಭುತ ಗಾಯನದ ಮೂಲಕ ವೆಂಕಟೇಶ್ ಕುಮಾ‌ರ್ ಅವರು ದೇಶ ವಿದೇಶಗಳಲ್ಲಿ ಪ್ರಸಿದ್ದಿ ಪಡೆದಿದ್ದಾರೆ. ಅವರ ಸಾಧನೆ ಪರಿಗಣಿಸಿ ಈ ಆಯ್ಕೆ ಮಾಡಲಾಗಿದ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *