ಧರ್ಮಸ್ಥಳ ಗ್ರಾಮದಲ್ಲಿ ಹೆಣ ಹೂತ ಪ್ರಕರಣ ಸಂಬಂಧ ದೂರುದಾರನಾಗಿ ಬಂದು ಜೈಲು ಸೇರಿರುವ ಚಿನ್ನಯ್ಯನನ್ನು ಪೊಲೀಸರು ಇಂದು ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಿದ್ದರು.

ಈ ವೇಳೆ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ನಂದೇನು ತಪ್ಪಿಲ್ಲ ಎಂದು ಬಂಧಿತ ಆರೋಪಿ ಚಿನ್ನಯ್ಯ, ನ್ಯಾಯಾಧೀಶರ ಎದುರು ಹೇಳಿಕೊಂಡಿದ್ದಾನೆ. ಈ ವೇಳೆ ನ್ಯಾಯಾಧೀಶರ ಎದುರು ಆರೋಪಿ ಚಿನ್ನಯ್ಯ ಕಣ್ಣೀರಿಟ್ಟಿದ್ದಾರೆ. ಈ ಪ್ರಕರಣದಲ್ಲಿ ನಂದೇನು ತಪ್ಪಿಲ್ಲ ಎಂದು ಚಿನ್ನಯ್ಯ ಕಣ್ಣೀರಿಟ್ಟಿದ್ದಾನೆ ಎಂದು ವರದಿಯಾಗಿದೆ.




