ಸೆ.24–27: ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್

Share with

ಮಂಗಳೂರು/ಉಡುಪಿ: ಇನ್ನೇನು ಕೆಲ ದಿನಗಳಲ್ಲಿ ಮುಂಗಾರು ನಿರ್ಗಮಿಸಲಿದ್ದು, ಸೆ. 24ರಿಂದ 27ರವರೆಗೆ ಕರಾವಳಿ ಭಾಗದಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ವೇಳೆ ದ.ಕ., ಉಡುಪಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದ.ಕ. ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂಗಳವಾರ ಲಘು ಮಳೆಯಾಗಿದೆ.

ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಇದೇ ರೀತಿ ಉಡುಪಿ ಜಿಲ್ಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಲಘು ಮಳೆಯಾಗಿದ್ದು, ಉಳಿದಂತೆ ಬಿಸಿಲು, ಮೋಡ ಕವಿದ ವಾತಾವರಣ ಇತ್ತು.

ಸೋಮವಾರ ತಡರಾತ್ರಿ ಕೆಲವೆಡೆಗಳಲ್ಲಿ ಸಾಧಾರಣ ಮಳೆಯಾಗಿದೆ.


Share with

Leave a Reply

Your email address will not be published. Required fields are marked *