ಖ್ಯಾತ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ವಿಧಿವಶ

Share with

ಬೆಂಗಳೂರು : ಕನ್ನಡದ ಜನಪ್ರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಭೈರಪ್ಪ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ದಾಟು, ವಂಶವೃಕ್ಷ, ಸಾಕ್ಷಿ, ಗೃಹಭಂಗ, ದೂರಸರಿದರು, ಮತದಾನ, ನಾಯಿನೆರಳು, ಅಂಚು, ಅನ್ವೇಷಣ ಮೊದಲಾದ ಕೃತಿಗಳನ್ನು ರಚಿಸಿದ್ದಾರೆ. ಅವರ ಕೃತಿಗಳು ಹಲವು ಬಾರಿ ಮರುಮುದ್ರಣಗೊಂಡಿವೆ. ಅಲ್ಲದೆ, ಮರಾಠಿ, ಇಂಗ್ಲೀಷ್, ಹಿಂದಿ ಮೊದಲಾದ ಭಾಷೆಗಳಿಗೆ ಅನುವಾದಗೊಂಡಿವೆ. ಅವರ ಕೆಲವು ಕಾದಂಬರಿಗಳು ಚಲನಚಿತ್ರಗಳಾಗಿವೆ.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸರಸ್ವತೀ ಸಮ್ಮಾನ್, ಪಂಪ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಪದ್ಮಭೂಷಣ ಪ್ರಶಸ್ತಿ ಲಭಿಸಿವೆ. 1999 ರಲ್ಲಿ ಕನಕಪುರದಲ್ಲಿ ನಡೆದ 67ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ನಾಡು ಕಂಡ ಮಹಾನ್ ಸಾಹಿತಿಯ ನಿಧನಕ್ಕೆ ಗಣ್ಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.


Share with

Leave a Reply

Your email address will not be published. Required fields are marked *