ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಬಿಹಾರದ “ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆ”ಗೆ ಚಾಲನೆ ನೀಡಲಿದ್ದು, ರಾಜ್ಯದ 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ರೂ.ಗಳನ್ನು ವರ್ಗಾಯಿಸಲಿದ್ದಾರೆ. ಈ ಯೋಜನೆಯಡಿ ಒಟ್ಟು 7,500 ಕೋಟಿ ರೂ.ಗಳನ್ನು ಜಮಾ ಮಾಡಲಿದ್ದಾರೆ.

ಮಹಿಳೆಯರನ್ನು “ಆತ್ಮನಿರ್ಭರ” (ಸ್ವಾವಲಂಬಿ) ಗಳನ್ನಾಗಿ ಮಾಡುವುದು ಮತ್ತು ಸ್ವ-ಉದ್ಯೋಗ ಮತ್ತು ಜೀವನೋಪಾಯದ ಅವಕಾಶಗಳ ಮೂಲಕ ಸಬಲೀಕರಣವನ್ನು ಉತ್ತೇಜಿಸುವ ಗುರಿಯನ್ನು ಈ ಯೋಜನೆ ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಯೋಜನೆಯು ಸಾರ್ವತ್ರಿಕ ಸ್ವರೂಪದ್ದಾಗಿದ್ದು, ಇದರ ಅಡಿಯಲ್ಲಿ ರಾಜ್ಯದ ಪ್ರತಿ ಕುಟುಂಬದ ಓರ್ವ ಮಹಿಳೆಗೆ ಆರ್ಥಿಕ ನೆರವು ನೀಡಲಾಗುವುದು, ಅವರು ತಮ್ಮ ಆಯ್ಕೆಯ ಉದ್ಯೋಗ ಅಥವಾ ಜೀವನೋಪಾಯ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುವು ಮಾಡಿಕೊಡಲಾಗುತ್ತದೆ ಎಂದು ಸರಕಾರ ಹೇಳಿದೆ.




