ಇನ್ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಗೀತಾ ಶಿವರಾಜ್ ಕುಮಾರ್

Share with

ಶಿವಮೊಗ್ಗ: ಇನ್ನುಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಮಹತ್ವದ ಘೋಷಣೆ ಹೊರಡಿಸಿದ್ದಾರೆ.

ಮಹಿಳಾ ಕಾಂಗ್ರೆಸ್ ಸಮಾರಂಭದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಈ ಹಿಂದೆ ಸ್ಪರ್ಧಿಸಿದ್ದರೂ ಕೂಡ ಪಕ್ಷ ಸಂಘಟನೆಯಲ್ಲಿ ಜೊತೆಗೆ ಇರುತ್ತೇನೆ. ನಿಮ್ಮೊಂದಿಗೆ ಕೆಲಸ ಮಾಡುತ್ತೇನೆ, ಯಾವಾಗ ಕರೆದರೂ ನಾನು ಬರುತ್ತೇನೆ ಎಂದು ತಿಳಿಸಿದರು.

ನೂತನ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಶ್ವೇತಾ ಬಂಡಿಯವರನ್ನು ಅಭಿನಂದಿಸಿದ ಅವರು, ಶ್ವೇತಾ ಬಂಡಿಯವರು ತಮ್ಮ ಚುನಾವಣೆಯ ಪ್ರಚಾರದಲ್ಲಿ ಶ್ರಮಿಸಿದ್ದಾರೆ. ಇಂದಿನ ಸಮಾವೇಶ ಖುಷಿ ತಂದಿದೆ. ಮಹಿಳೆಯರು ಅಬಲೆಯರಲ್ಲ. ಅವರಿಗೆ ಎಲ್ಲಾ ಶಕ್ತಿಯಿದೆ ಅವರು ಎಲ್ಲರನ್ನ ಜೊತೆಗೂಡಿಸಿಕೊಂಡು ಅವರು ಪಕ್ಷ ಸಂಘಟಿಸಲಿ ಎಂದು ಸಲಹೆ ನೀಡಿದರು. ನಾನು ಇನ್ಮುಂದೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ಆದರೆ ಪಕ್ಷದ ಎಲ್ಲರ ಜೊತೆಗೂ ದೃಢವಾಗಿ ಇರುತ್ತೇನೆ ಎಂದು ಪುನರುಚ್ಚರಿಸಿದರು.

ಗೀತಾ ಶಿವರಾಜ್‌ಕುಮಾರ್ ಚುನಾವಣೆಯಿಂದ ದೂರ ಸರಿದಿದ್ದಾರೆ. 2024ರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್ ಕುಮಾರ್, ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಇದೀಗ ಶಿವಮೊಗ್ಗದಲ್ಲೇ ತಮ್ಮ ಚುನಾವಣಾ ನಿವೃತ್ತಿ ಬಗ್ಗೆ ಘೋಷಿಸಿದ್ದಾರೆ. ಇನ್ಮುಂದೆ ನಾನು ಯಾವುದೇ ಚುನಾವಣೆಗೆ ನಿಲ್ಲೋದಿಲ್ಲ ಅಂತ ಗೀತಾ ಶಿವರಾಜ್‌ಕುಮಾರ್ ಘೋಷಿಸಿದ್ದಾರೆ


Share with

Leave a Reply

Your email address will not be published. Required fields are marked *