ಎದೆಗೆ ಗುಂಡು ಹೊಡೆಯುತ್ತೇವೆ.. ರಾಹುಲ್ ಗಾಂಧಿಗೆ ಬಿಜೆಪಿ ನಾಯಕನಿಂದ ಕೊಲೆ ಬೆದರಿಕೆ

Share with

ನವದೆಹಲಿ: ಕೇರಳದ ಖಾಸಗಿ ಟಿವಿ ವಾಹಿನಿಯೊಂದರ ಚರ್ಚೆಯಲ್ಲಿ ಸಂದರ್ಭದಲ್ಲಿ ಬಿಜೆಪಿಯ ಮಾಧ್ಯಮ ವಕ್ತಾರ ಪಿಂಟು ಮಹಾದೇವನ್ ಅವರು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಎದೆಗೆ ಗುಂಡು ಹೊಡೆಯುತ್ತೇವೆ ಎಂದು ಬಹಿರಂಗವಾಗಿ ಕೊಲೆ ಬೆದರಿಕೆ ಹಾಕಿದ್ದಾರೆ.

ಈ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ.

ಟಿವಿ ವಾಹಿನಿಯಲ್ಲಿ ರಾಹುಲ್ ಗಾಂಧಿಗೆ ಬಹಿರಂಗವಾಗಿ ಬೆದರಿಕೆ ಹಾಕಿರುವ ಬಿಜೆಪಿ ವಕ್ತಾರ ಪಿಂಟು ಮಹಾದೇವನ್ ಅವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಬೇಕು, ಬದಲಾಗಿ ನಿರ್ಲಕ್ಷ್ಯ ಮಾಡಿದರೆ ಪ್ರತಿಭಟನೆ ನಡೆಸಿ ಬಿಸಿ ಮುಟ್ಟಿಸಲಾಗುತ್ತದೆ ಪಿಂಟು ಮಹಾದೇವ್ ನೀಡಿರುವ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು ಸಾರ್ವಜನಿಕ ಚರ್ಚೆಯ ಸಮಯದಲ್ಲಿ ಈ ರೀತಿ ಹೇಳಿಕೆಗಳನ್ನು ನೀಡುವುದು ಸರಿಯಾದ ಕ್ರಮವಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ.


Share with

Leave a Reply

Your email address will not be published. Required fields are marked *