ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆ ದಾಖಲು; ಕರೆ ಮಾಡಿ ಆರೋಗ್ಯ ವಿಚಾರಿಸಿದ ಮೋದಿ

Share with

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ.

ಖರ್ಗೆ ಅವರಿಗೆ ವೈದ್ಯರು ಪೇಸ್‌ಮೇಕರ್ ಅಳವಡಿಸಲು ನಿರ್ಧರಿಸಿದ್ದಾರೆ.ಯೋಜಿತ ಶಸ್ತ್ರಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಸ್ಥಿರವಾಗಿದ್ದಾರೆ, ಚೆನ್ನಾಗಿದ್ದಾರೆ.ನಿಮ್ಮೆಲ್ಲರ ಕಾಳಜಿ ಮತ್ತು ಹಾರೈಕೆಗಳಿಗೆ ಧನ್ಯವಾದಗಳು” ಎಂದು ಪುತ್ರ, ಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಪೋಸ್ಟ್ ಮಾಡಿದ್ದಾರೆ.

“ಖರ್ಗೆ ಅವರ ನಿರಂತರ ಯೋಗಕ್ಷೇಮ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್ ಮಾಡಿದ್ದಾರೆ.


Share with

Leave a Reply

Your email address will not be published. Required fields are marked *