ತಮಿಳುನಾಡಿನಲ್ಲಿ ರಾವಣನ ಬದಲು ರಾಮನ ಪ್ರತಿಕೃತಿ ದಹಿಸಿದ ಗುಂಪು, ಒರ್ವನ ಬಂಧನ

Share with

ತಿರುಚ್ಚಿ, ಅಕ್ಟೋಬರ್ 03: ತಮಿಳುನಾಡಿನ ತಿರುಚ್ಚಿಯಲ್ಲಿ ಪುರುಷರ ಗುಂಪೊಂದು ರಾವಣನ ಬದಲು ಶ್ರೀರಾಮನ ಪ್ರತಿಕೃತಿ ದಹಿಸಿ ಜನರ ಕೆಂಗಣ್ಣಿಗೆ ಗುರಿಯಾಗಿದೆ. ರಾಮನ ಪ್ರತಿಕೃತಿ ದಹಿಸಿದ್ದಷ್ಟೇ ಅಲ್ಲದೆ ರಾವಣನ ಸ್ತುತಿಯನ್ನು ಪಠಿಸಿದ್ದಾರೆ. ‘ಫಿಫ್ತ್ ತಮಿಳು ಸಂಗಮ್’ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾದ ಈ ದೃಶ್ಯಗಳು ತ್ವರಿತವಾಗಿ ವೈರಲ್ ಆಗಿದ್ದು, ಪೊಲೀಸ್ ಕ್ರಮಕ್ಕೆ ಕಾರಣವಾಯಿತು. ವೀಡಿಯೊದಲ್ಲಿ, ಪುರುಷರು ರಾಮನ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಾ ರಾವಣನನ್ನು ಸ್ತುತಿಸಿ ಎಂದು ಘೋಷಣೆ ಕೂಗುತ್ತಿರುವುದನ್ನು ಕಾಣಬಹುದು.

ಸೈಬರ್ ಕ್ರೈಂ ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 192, 196 (1) (ಎ), 197, 299, 302 ಮತ್ತು 353 (2) ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ವಿಚಾರಣೆಯ ನಂತರ, ಅಧಿಕಾರಿಗಳು ಗುರುವಾರ 36 ವರ್ಷದ ಅಡೈಕಳರಾಜ್ ಅವರನ್ನು ಬಂಧಿಸಿದ್ದಾರೆ ಮತ್ತು ಭಾಗಿಯಾಗಿರುವ ಇತರರಿಗಾಗಿ ಹುಡುಕಾಟವನ್ನು ಮುಂದುವರೆಸಿದ್ದೇವೆ ಎಂದು ಹೇಳಿದರು.


Share with

Leave a Reply

Your email address will not be published. Required fields are marked *