2 ವರ್ಷದೊಳಗಿನ ಮಕ್ಕಳಿಗೆ ಶೀತ, ಕೆಮ್ಮಿನ ಸಿರಪ್ ನೀಡಬೇಡಿ; 11 ಮಕ್ಕಳ ಸಾವಿನ ಬಳಿಕ ಕೇಂದ್ರ ಸರ್ಕಾರ ಎಚ್ಚರಿಕೆ

Share with

ನವದೆಹಲಿ, ಅಕ್ಟೋಬರ್ 3: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕಿಡ್ನಿ ಸಂಬಂಧಿತ (Kidney Failure)  ತೊಂದರೆಗಳಿಂದಾಗಿ 11 ಮಕ್ಕಳು ಸಾವನ್ನಪ್ಪಿದ್ದರು. ಕೆಮ್ಮಿನ ಸಿರಪ್ (Cough Syrup) ಸೇವಿಸಿದ್ದರಿಂದಲೇ ಅವರು ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ (Central Government) 2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬಾರದು ಎಂದು ಶಿಫಾರಸು ಮಾಡಿದೆ.

ಕೇಂದ್ರ ಸರ್ಕಾರವು ಇಂದು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಕ್ಕಳಿಗೆ ತೀರಾ ಅಗತ್ಯವಿದ್ದರೆ ಮಾತ್ರ ಕೆಮ್ಮಿನ ಸಿರಪ್ ನೀಡಲು ಸೂಚಿಸಿದೆ. ಕೆಮ್ಮಿನ ಸಿರಪ್ ಮಾದರಿಗಳ ಪರೀಕ್ಷೆಗಳು “ಡೈಥಿಲೀನ್ ಗ್ಲೈಕಾಲ್ (DEG) ಅಥವಾ ಎಥಿಲೀನ್ ಗ್ಲೈಕಾಲ್ (EG)” ಅನ್ನು ಒಳಗೊಂಡಿಲ್ಲ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇದು ಗಂಭೀರವಾದ ಕಿಡ್ನಿ ಸಮಸ್ಯೆಯನ್ನು ಉಂಟುಮಾಡುವ ಮಾಲಿನ್ಯಕಾರಕಗಳನ್ನು ಹೊಂದಿರುತ್ತದೆ.

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇಲ್ಲಿಯವರೆಗೆ 11 ಮಕ್ಕಳು ಕೆಮ್ಮಿನ ಸಿರಪ್ ಸೇವಿಸಿದ ಮೇಲೆ ಸಾವನ್ನಪ್ಪಿದ್ದಾರೆ. ಇದು ತೀವ್ರ ಕಳವಳವನ್ನುಂಟುಮಾಡಿದೆ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಶೀತ, ಕೆಮ್ಮು ಔಷಧಿಗಳನ್ನು ಸೇವಿಸಿದ ಕೆಲವು ದಿನಗಳ ನಂತರ ಮಕ್ಕಳು ಮೂತ್ರಪಿಂಡದ ಸಮಸ್ಯೆಗಳನ್ನು ಅನುಭವಿಸಿದ್ದರು.

ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆರೋಗ್ಯ ಸೇವೆಗಳ ಮಹಾನಿರ್ದೇಶಕರು (DGHS) ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮಕ್ಕಳ ಜನಸಂಖ್ಯೆಯಲ್ಲಿ ಕೆಮ್ಮಿನ ಸಿರಪ್‌ಗಳ ಕಡಿಮೆ ಬಳಕೆಯ ಕುರಿತು ಸಲಹೆಯನ್ನು ನೀಡಿದ್ದಾರೆ.


Share with

Leave a Reply

Your email address will not be published. Required fields are marked *