ನಾಳೆಯ ಹವಾಮಾನ: 26 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್; ಬೆಂಗಳೂರಲ್ಲಿ ಗುಡುಗು ಸಹಿತ ಮಳೆ

Share with

ಬೆಂಗಳೂರು, ಅಕ್ಟೋಬರ್ 14: 26 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ರಾಜ್ಯದಲ್ಲಿ ನಾಳೆಯೂ ವರುಣನ (Weather Forecast)  ಆರ್ಭಟ ಮುಂದುವರಿಯಲಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟ, ಹಳೆ ಮೈಸೂರು, ಕರಾವಳಿ ಮತ್ತು ಘಟ್ಟ ಪ್ರದೇಶ ಸೇರಿ ವಿವಿಧೆಡೆ ಉತ್ತಮ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಲ್ಲೂ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ?
ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 30-40 ಕಿ.ಮೀ.ನಷ್ಟು ಇರಲಿದೆ. ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲೂ ಸಾಧಾರಣ ಮಳೆಯ ನಿರೀಕ್ಷೆ ಇದೆ. ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಹಾಸನ, ಮಂಡ್ಯ ಭಾಗದಲ್ಲೂ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರದಲ್ಲಿ ಒಣಹವೆ ಅಥವಾ ಮೋಡ ಕವಿದ ವಾತಾವಣರ ಕಂಡುಬರುವ ಸಾಧ್ಯತೆ ಇದೆ.


Share with

Leave a Reply

Your email address will not be published. Required fields are marked *