ಮಾವೋವಾದಿ ನಿರ್ಮೂಲನೆ ಮಾಡುತ್ತೇವೆ, 75 ಗಂಟೆಗಳಲ್ಲಿ 308ಕ್ಕೂ ಹೆಚ್ಚು ನಕ್ಸಲರ ಶರಣಾಗತಿ: ಪ್ರಧಾನಿ ಮೋದಿ

Share with

ಭಾರತದಲ್ಲಿರುವ ನಕ್ಸಲಿಸಂ (Naxalism India) ಸಂಪೂರ್ಣ ನಾಶ ಮಾಡುತ್ತೇವೆ ಎಂದು ಈ ಹಿಂದೆ ದೇಶದ ಗೃಹಮಂತ್ರಿ ಅಮಿತ್ ಶಾ ಹೇಳುತ್ತಿದ್ದರು. ಇದೀಗ ಪ್ರಧಾನಿ ನರೇಂದ್ರ ಮೋದಿ ಕೂಡ ನಕ್ಸಲಿಸಂ ಬಗ್ಗೆ ಗುಡುಗಿದ್ದಾರೆ. ಪ್ರಧಾನಿ ಮೋದಿ ನಕ್ಸಲಿಸಂನ್ನು ಕೆಂಪು ಭಯೋತ್ಪಾದನೆ ಎಂದು ಕರೆದಿದ್ದಾರೆ. ಈ ಕೆಂಪು ಭಯೋತ್ಪಾದನೆಯನ್ನು ನಾಶ ಮಾಡುವ ದಿನ ದೂರವಿಲ್ಲ, ನಕ್ಸಲಿಸಂ ದೇಶದ ವಿರುದ್ಧದ ಪಾಪ ಎಂದು ಹೇಳಿದ್ದಾರೆ. ಮಾವೋವಾದಿ ಉಗ್ರವಾದವು ಭಾರತದ ಯುವಕರಿಗೆ ಮಾಡಿದ ಅನ್ಯಾಯ, ಅದನ್ನು ಸಂಪೂರ್ಣವಾಗಿ ತೊಡೆದು ಹಾಕುವುದೇ ತಮ್ಮ ಸರ್ಕಾರದ ದೃಢಸಂಕಲ್ಪ ಎಂದು ಹೇಳಿದ್ದಾರೆ.


ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮೋದಿ, ಭಯೋತ್ಪಾದನೆಯ ವಿರುದ್ಧ ಭಾರತ ಬಲವಾದ ನಿಲುವನ್ನು ತೆಗೆದುಕೊಂಡಿದೆ. ಪಹಲ್ಗಾಮ್ನಲ್ಲಿ ಭಾರತೀಯರನ್ನು ಹತ್ಯೆ ಮಾಡಿದ್ದಕ್ಕಾಗಿ ಪಾಕಿಸ್ತಾನ ಹಾಗೂ ಭಯೋತ್ಪಾದಕರಿಗೆ ಆಪರೇಷನ್ ಸಿಂಧೂರ್ ಮೂಲಕ ಉತ್ತರ ನೀಡಿದ್ದೇವೆ. ದೇಶವು ಗಡಿಯಾಚೆಗಿನ ಬೆದರಿಕೆಗಳನ್ನು ನಾಶ ಮಾಡಲು ಹಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದರು.

ಭಾರತವು ಈಗ ಚಿಪ್‌ಗಳಿಂದ ಹಿಡಿದು ಹಡಗುಗಳವರೆಗೆ ಎಲ್ಲವನ್ನೂ ತಯಾರಿಸುತ್ತಿದೆ. ಸ್ವಾವಲಂಬನೆ ಮೂಲಕ ಭಾರತ ಪ್ರಗತಿ ಸಾಧಿಸುತ್ತಿದೆ. ಜತೆಗೆ ಈಗಾಗಲೇ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ರಾಷ್ಟ್ರಗಳಲ್ಲಿ ಒಂದಾಗಿದೆ. ಇದರ ನಡುವೆ ಇಡೀ ಮಾವೋವಾದಿ ಪರಿಸರ ವ್ಯವಸ್ಥೆಯನ್ನು ನಾಶಪಡಿಸುತ್ತಿದೆ ಎಂದು ಹೇಳಿದರು. ಇದೇ ವೇಳೆ, ಕಾಂಗ್ರೆಸ್ ವಿರುದ್ಧವು ಕೂಡ ಟೀಕೆ ಮಾಡಿದರು, ಹಿಂದಿನ ಯುಪಿಎ ಸರ್ಕಾರವೂ ಭ್ರಷ್ಟಾಚಾರದೊಂದಿಗೆ ರಾಜಿ ಮಾಡಿಕೊಂಡಿದೆ. ವಿದೇಶಿ ಶಕ್ತಿಗಳ ಜತೆಗೆ ಭಾರತದ ವಿರುದ್ಧ ಕೈಜೋಡಿಸಿತ್ತು. ಕಾಂಗ್ರೆಸ್ ಬಲವಂತದ ರಾಜಕೀಯವನ್ನು ಮಾಡುತ್ತಿತ್ತು. ಇದರಿಂದಾಗಿ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಕ ಹಾನಿಯಾಗಿದೆ ಎಂದು ಹೇಳಿದರು.


Share with

Leave a Reply

Your email address will not be published. Required fields are marked *