ಇಡುಕ್ಕಿ: ನಿರಂತರ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳು ಇಡುಕ್ಕಿಯಾದ್ಯಂತ ವ್ಯಾಪಕ ಹಾನಿಯನ್ನುಂಟುಮಾಡಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಭಾನುವಾರ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪ್ರವಾಸೋದ್ಯಮ ಚಟುವಟಿಕೆಗಳಿಗೆ ನಿರ್ಬಂಧ ಹೇರಿದೆ. ಕಯಾಕಿಂಗ್, ಬೋಟಿಂಗ್ ಮತ್ತು ಜೀಪ್ ಟ್ರೆಕ್ಕಿಂಗ್ ಸೇರಿದಂತೆ ಎಲ್ಲಾ ಸಾಹಸ ಚಟುವಟಿಕೆಗಳನ್ನು ಪ್ರಸ್ತುತ ನಿಷೇಧಿಸಲಾಗಿದೆ.

ಪೆರಿಯಾರ್ ನದಿ ಉಕ್ಕಿ ಹರಿಯುತ್ತಿರುವುದರಿಂದ ವಂಡಿಪೆರಿಯಾರ್ ನ ಚಂದ್ರವನಂ ಮತ್ತು ವಿಕಾಸ್ ನಗರ ಪ್ರದೇಶಗಳಲ್ಲಿ ಏಳು ಮನೆಗಳು ಜಲಾವೃತಗೊಂಡಿವೆ. ಕಂದಾಯ ಅಧಿಕಾರಿಗಳು ಹಾನಿಗೊಳಗಾದ ಸ್ಥಳಕ್ಕೆ ಭೇಟಿ ನೀಡಿ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಪ್ರಾರಂಭಿಸಿದರು.
ಮುಲ್ಲಪೆರಿಯಾರ್ ಅಣೆಕಟ್ಟಿನಿಂದ ನೀರು ಬಿಡುತ್ತಿರುವುದರಿಂದ ಇನ್ನಷ್ಟು ಮನೆಗಳಿಗೆ ಹಾನಿಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯ ಪೆರಿಯಾರ್ ನದಿಯ ದಡದಲ್ಲಿ ವಾಸಿಸುವ ಜನರಿಗೆ ತೀವ್ರ ಎಚ್ಚರಿಕೆ ವಹಿಸುವಂತೆ ಎಚ್ಚರಿಕೆ ನೀಡಿದೆ.




