ಕಲಬುರಗಿ, ಅಕ್ಟೋಬರ್ 19: ತಹಶೀಲ್ದಾರ್ ಅನುಮತಿ ನಿರಾಕಣೆ ನಡುವೆಯೂ ಪಥಸಂಚಲನ ನಡೆಸುತ್ತಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ನಡೆದಿದೆ. ತಹಶೀಲ್ದಾರ್ ಶ್ರೀಯಾಂಕಾ ಆದೇಶಕ್ಕೆ ಸೆಡ್ಡು ಹೊಡೆದು ಪಥಸಂಚಲನ ನಡೆಸಲಾಗಿದ್ದು, ಸೇಡಂ ಪಟ್ಟಣದ ರೈಲ್ವೆ ನಿಲ್ದಾಣದ ಬಳಿ RSS ಕಾರ್ಯಕರ್ತರನ್ನ ವಶಕ್ಕೆ ಪಡೆಯಲಾಗಿದೆ. ಇಂದು ಸಂಜೆ ಪಥಸಂಚಲನಕ್ಕೆ ಅನುಮತಿ ಕೋರಿ RSS ಮುಖಂಡರು ಸಲ್ಲಿಸಿದ್ದ ಮನವಿಯನ್ನ ಸೇಡಂ ತಹಶೀಲ್ದಾರ್ ತಿರಸ್ಕರಿಸಿದ್ದರು. ಹೀಗಿದ್ದರೂ ಪಥಸಂಚಲನ ನಡೆಸುವ ಯತ್ನ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪ್ರತಿನಿಧಿಸುವ ಸೇಡಂ ಕ್ಷೇತ್ರದಲ್ಲಿ ನಡೆದಿದೆ.





