ಭಾಷೆ ಸಮಸ್ಯೆಯಿಂದಾಗಿ ಯುವಕ-ಯುವತಿಯರು ಉದ್ಯೋಗ ವಂಚಿತರಾಗಬಾರದು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ 15 ಪ್ರಾದೇಶಿಕ ಭಾಷೆಗಳಲ್ಲಿ ಸರ್ಕಾರಿ ಉದ್ಯೋಗ ನೇಮಕಾತಿ ಪರೀಕ್ಷೆ ನಡೆಸುವ ತೀರ್ಮಾನ ಕೈಗೊಂಡಿದೆ.
ಹಿಂದಿ, ಇಂಗ್ಲಿಷ್ ಹೊರತುಪಡಿಸಿ ಕನ್ನಡ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಈ ಮಾಹಿತಿ ನೀಡಿದ್ದಾರೆ.