ಗೆಲುವಿನೊಂದಿಗೆ ಆಸ್ಟ್ರೇಲಿಯಾಕ್ಕೆ ವಿದಾಯ ಹೇಳಿದ ರೋಹಿತ್, ಕೊಹ್ಲಿ

Share with

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಭಾರತ ಏಕದಿನ ತಂಡಕ್ಕೆ ಸರಣಿ ಗೆಲ್ಲಲು ಸಾಧ್ಯವಾಗದಿದ್ದರೂ, ಸರಣಿಯ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ಪ್ರವಾಸವನ್ನು ಅಂತ್ಯಗೊಳಿಸಿದೆ. ಮೊದಲೆರಡು ಪಂದ್ಯಗಳನ್ನು ಸೋತಿದ್ದ ಟೀಂ ಇಂಡಿಯಾ ಸರಣಿಯನ್ನು ಕಳೆದುಕೊಂಡಿತ್ತು. ಆದರೆ ಕ್ಲೀನ್ ಸ್ವೀಪ್ ಮುಜುಗರದಿಂದ ಪಾರಾಗಲು ಕೊನೆಯ ಪಂದ್ಯವನ್ನು ಗೆಲ್ಲಲೇಬೇಕಾಗಿತ್ತು. ಅದರಂತೆ ತಂಡವನ್ನು ಈ ಮುಜುಗರದಿಂದ ಪಾರು ಮಾಡುವ ಜವಾಬ್ದಾರಿ ಹೊತ್ತಿದ್ದ ಇಬ್ಬರು ಮಾಜಿ ನಾಯಕರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ 168 ರನ್ಗಳ ಅಜೇಯ ಜೊತೆಯಾಟವನ್ನಾಡುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಈ ವೇಳೆ ರೋಹಿತ್ ಅಜೇಯ ಶತಕ ಬಾರಿಸಿದರೆ, ಕೊಹ್ಲಿ ಅಜೇಯ ಅರ್ಧಶತಕದ ಇನ್ನಿಂಗ್ಸ್ ಆಡಿದರು.

ಸಿಡ್ನಿಯಲ್ಲಿ ನಡೆದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾವನ್ನು 9 ವಿಕೆಟ್‌ಗಳಿಂದ ಏಕಪಕ್ಷೀಯವಾಗಿ ಸೋಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 46.4 ಓವರ್‌ಗಳಲ್ಲಿ ತನ್ನಲ್ಲೇ ವಿಕೆಟ್ ಕಳೆದುಕೊಂಡು 236 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ, ರೋಹಿತ್ ಶರ್ಮಾ ಶತಕ ಮತ್ತು ಕೊಹ್ಲಿ ಅರ್ಧಶತಕ ಬಾರಿಸುವುದರ ಜೊತೆಗೆ, ಎರಡನೇ ವಿಕೆಟ್‌ಗೆ 168 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಇದರ ಫಲವಾಗಿ ಭಾರತ ತಂಡವು 38.3 ಓವರ್‌ಗಳಲ್ಲಿ ಒಂದು ವಿಕೆಟ್‌ ಕಳೆದುಕೊಂಡು 237 ರನ್ಗಳ ಗುರಿ ಮುಟ್ಟಿತು. ಆದಾಗ್ಯೂ, ಆಸ್ಟ್ರೇಲಿಯಾ ಮೂರು ಪಂದ್ಯಗಳ ಸರಣಿಯನ್ನು 2-1 ರಿಂದ ಗೆದ್ದುಕೊಂಡಿತು.


Share with

Leave a Reply

Your email address will not be published. Required fields are marked *