’ಬಿಗ್ ಬಾಸ್ ಗಿಲ್ಲಿ ನಟ’ನ ವಿರುದ್ಧ ಕೇಸು ದಾಖಲು..!

Share with

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ ತನ್ನ ಆಟ ಹಾಗೂ ವ್ಯಕ್ತಿತ್ವದಿಂದ ಗಮನ ಸೆಳೆಯುತ್ತಿದ್ದಾರೆ.

ಈ ಸೀಸನ್ ಆರಂಭವಾದಾಗಿನಿಂದಲೂ ಗಿಲ್ಲಿ ಬಿಗ್ ಬಾಸ್ ಮನೆಯಲ್ಲಿ ತನ್ನ ಹಾಸ್ಯ ಸ್ವಭಾವದಿಂದ ವೀಕ್ಷಕರ ಮನಗೆಲ್ಲುತ್ತಿದ್ದಾರೆ. ಅವರು ಈ ಸೀಸನ್‌ ವಿನ್ನ‌ರ್ ಆಗಬೇಕೆಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಗಿಲ್ಲಿ – ಕಾವ್ಯ ಸ್ನೇಹ, ಗಿಲ್ಲಿ ಕೊಡುವ ಟಕ್ಕರ್ ನೋಡುತ್ತಾ ವೀಕ್ಷಕರು ಗಿಲ್ಲಿಯತ್ತ ಹೆಚ್ಚಿನ ಗಮನ ಕೊಡುತ್ತಿದ್ದಾರೆ.

ಈ ನಡುವೆ ‘ಬಿಗ್ ಬಾಸ್’ ಗಿಲ್ಲಿ ವಿರುದ್ಧ ದೂರು ದಾಖಲಾಗಿರುವ ಕುರಿತು ವರದಿಯಾಗಿದೆ. ಗಿಲ್ಲಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.

ಇತ್ತೀಚೆಗೆ ಗಿಲ್ಲಿ ಅವರು ರಿಷಾ ಅವರ ಬಟ್ಟೆಗಳನ್ನು ತೆಗೆದುಕೊಂಡು ಬಾತ್ ರೂಮ್ ಏರಿಯಾದಲ್ಲಿಟ್ಟಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿ ಗಿಲ್ಲಿ ವಿರುದ್ಧ ದೂರು ನೀಡಲಾಗಿದೆ.

ರಿಷಾ ಬಟ್ಟೆಗಳನ್ನು ವಾಷ್ ರೂಂನಲ್ಲಿ ಇಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ ದೂರು ಕೊಡಲಾಗಿದೆ. ಜೊತೆಗೆ ಮಹಿಳೆಯರ ಬಗ್ಗೆ ಅವಮಾನಕರ ರೀತಿಯಲ್ಲಿ ಮಾತಾನಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಈ ಕುರಿತು ಮಹಿಳಾ ಆಯೋಗ ಸಂಬಂಧ ಪಟ್ಟ ವಿಡಿಯೋ ಫೊಟೇಜ್‌ಗಳನ್ನು ಪರಿಶೀಲನೆ ಮಾಡಿದೆ. ಮೇಲ್ನೋಟಕ್ಕೆ ಇಲ್ಲಿ ಗಿಲ್ಲಿ ಅವರ ತಪ್ಪಾಗಿ ನಡೆದುಕೊಂಡ ಬಗ್ಗೆ ಯಾವುದೇ ಸಾಕ್ಷಿ ಸಿಕ್ಕಿಲ್ಲ ಎನ್ನಲಾಗಿದೆ. ಇದರಿಂದಾಗಿ ಪ್ರಕರಣವನ್ನು ಲೀಗಲ್ ಟೀಮ್ ಅಭಿಪ್ರಾಯಕ್ಕೆ ಕಳುಹಿಸಿ ಕೊಡಲಾಗಿದೆ ಎಂದು ವರದಿಯಾಗಿದೆ.


Share with

Leave a Reply

Your email address will not be published. Required fields are marked *