ಬಿಹಾರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ರಾಷ್ಟ್ರೀಯ ಜನತಾ ದಳ (RJD) ನಾಯಕ ಮತ್ತು ಶಾಸಕ ತೇಜಸ್ವಿ ಯಾದವ್ ಆಯ್ಕೆಯಾಗಿದ್ದಾರೆ. ಈ ಚುನಾವಣೆಯ 243 ಸ್ಥಾನಗಳಲ್ಲಿ NDA 202 ಸ್ಥಾನಗಳನ್ನು ಗಳಿಸಿತು.

ಆದರೆ, ಮಹಾಘಟಬಂಧನವು ಕೇವಲ 35 ಸ್ಥಾನಗಳನ್ನು ಮಾತ್ರ ಗಳಿಸಿ, ಹೀನಾಯ ಸೋಲನ್ನು ಅನುಭವಿಸಿದೆ. ಹೀಗಾಗಿ, ಸೋಲನ್ನು ಪರಿಶೀಲಿಸಲು ಈ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ವಿವಿಧ ವಿಷಯಗಳ ಚರ್ಚೆಯ ಬಳಿಕ ತೇಜಸ್ವಿ ಯಾದವ್ ಅವರನ್ನು ಬಿಹಾರ ವಿಧಾನಸಭೆಯ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಲಾಗಿದೆ.




