2 ತಿಂಗಳ ಗೃಹಲಕ್ಷ್ಮೀ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ ; ಹೆಬ್ಬಾಳ್ಕರ್

Share with

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಗುಡ್‌ನ್ಯೂಸ್‌ ನೀಡಿದ್ದಾರೆ. ಬಾಕಿ ಇರುವಂತ ಸೆಪ್ಟೆಂಬರ್, ಅಕ್ಟೋಬರ್ ಎರಡು ತಿಂಗಳ ಗೃಹ ಲಕ್ಷ್ಮೀ ಯೋಜನೆಯ ಹಣವನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಅವರು ತುಮಕೂರಿನಲ್ಲಿ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ, ಗೃಹಲಕ್ಷ್ಮೀ ಬ್ಯಾಂಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಸೆಪ್ಟೆಂಬರ್, ಅಕ್ಟೋಬರ್ ತಿಂಗಳ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಮಾಡಿಲ್ಲ. ಆದಷ್ಟು ಬೇಗ ಗೃಹಲಕ್ಷ್ಮೀ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡುತ್ತೇವೆ. ಸೆಪ್ಟೆಂಬರ್ – ಅಕ್ಟೋಬರ್ 2 ತಿಂಗಳ ಹಣ ಬರಬೇಕು. ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ನಮ್ಮ ಗೃಹಲಕ್ಷ್ಮೀಯನ್ನು ಕಾಪಿ ಮಾಡಿಕೊಂಡು ಬಿಜೆಪಿ ಅವರು ಎಲ್ಲಾ ಕಡೆ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ಕರ್ನಾಟಕವನ್ನು ರೋಲ್ ಮಾಡಲ್ ಮಾಡಿಕೊಂಡು ಹೋಗುತ್ತಿದ್ದಾರೆ. ಸೆಪ್ಟೆಂಬರ್ ,ಅಕ್ಟೋಬರ್ ಕಂತನ್ನು ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇವೆ ಎಂದರು.

ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಮಾತನಾಡಿದರು. ಬಹುನಿರೀಕ್ಷಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು. ತುಮಕೂರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.


Share with

Leave a Reply

Your email address will not be published. Required fields are marked *